ಶಿಕಾರಿಪುರ:23/12/2025
ತಾಲ್ಲೂಕಿನ ಮತ್ತಿ ಕೋಟೆ ಗ್ರಾಮದ ಕಾಂಗ್ರೆಸ್ ನಾಯಕರಾದ ಕೋಟ್ರೇಶಪ್ಪ ಕಡೂರು ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷ ಸೇರರ್ಪಡೆಯಾದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರು ದೇಶದಲ್ಲಿ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಯನ್ನು ಗಮನಿಸಿ ಬೃಹತ್ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ರೈತ ನಾಯಕ ಶ್ರೀ ಬಿ ಎಸ್ ಯಡಿಯೂರಪ್ಪ ರವರ ನೇತೃತ್ವದಲ್ಲಿ ಶಿಕಾರಿಪುರ ತಾಲ್ಲೂಕು ಸರ್ವಾಂಗೀಣ ಅಭಿವೃದ್ಧಿ ಹೊಂದಿದ್ದು ಮಾದರಿ ತಾಲ್ಲೂಕು ಆಗಿದೆ. 2000 ಕೋಟಿಯಷ್ಟು ನೀರಾವರಿ ಯೋಜನೆಯನ್ನು 2 ವರ್ಷದಲ್ಲಿ ಪೂರ್ಣಗೊಳಿಸಿದ್ದು ಏಷ್ಯ ಖಂಡದಲ್ಲೇ ದಾಖಲೆಯಾಗಿದೆ ಎಂದರು.
ತಾಲೂಕು ಬಿಜೆಪಿ ಅಧ್ಯಕ್ಷ ಸಂಕ್ಲಾಪೂರ ಹನುಮಂತಪ್ಪ, ರೈತ ಮೊರ್ಚಾ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ, ಉಪಾಧ್ಯಕ್ಷ ಗಿರೀಶ ದಾರವಾಢ, ಟಿಎಪಿಎಂ ಎಸ್ ಉಪಾಧ್ಯಕ್ಷ ಸುರೇಶ, ಕಾರ್ಯದರ್ಶಿ ಅಶೋಕ್ ಮಾರವಳ್ಳಿ, ಎಪಿಎಂಸಿ ಮಾಜಿ ಅಧ್ಯಕ್ಷ ಸತೀಶ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ವರದಿ: ಇಂಜಿ ಶಿರಾಳಕೊಪ್ಪ

