ವಿಜಯನಗರ ಜಿಲ್ಲೆ ಕೂಡ್ಲಿಗಿ:

ಕೂಡ್ಲಿಗಿ: ಮೇನ್ ಬಾಯ್ಸ್ ಶಾಲೆ ವಿದ್ಯಾರ್ಥಿನಿಯರು-ರಾಜ್ಯ ಕ್ರೀಡಾ ಕೂಟಕ್ಕೆ ಆಯ್ಕೆ– ವಿಜಯನಗರ ಜಿಲ್ಲೆ ಕೂಡ್ಲಿಗಿ: ಅಕ್ಟೋಬರ್ 30ರಂದು ಹೊಸಪೇಟೆಯಲ್ಲಿ, ಜರುಗಿದ “ವಿಜಯನಗರ ಜಿಲ್ಲಾ ಮಟ್ಟದ ಕ್ರೀಡಾಕೂಟ” ದಲ್ಲಿ. ಪಟ್ಟಣದ ಮೇನ್ ಬಾಯ್ಸ್ ಶಾಲೆಯ ವಿದ್ಯಾರ್ಥಿನಿಯರು ಕ್ರೀಡೆಗಳಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮೂರು ಕ್ರೀಡೆಗಳಲ್ಲಿ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆಯೋ ಮೂಲಕ, ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಮೇನ್ ಬಾಯ್ಸ್ ಶಾಲೆಯ ವಿದ್ಯಾರ್ಥಿನಿಯರು, ತಮ್ಮ ಶಾಲೆಗೆ ಕೀರ್ತಿ ತಂದಿದ್ದಾರೆಂದು ಶಾಲೆಯ ಶಿಕ್ಷಕರು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿನಿಯರಾದ ಜಿ.ಗೌರಮ್ಮ (ಉದ್ದ ಜಿಗಿತ), ಮೇಘನಾ, ಜಿ.ಗೌರಮ್ಮ, ಜಿ.ಲಕ್ಷ್ಮೀ, ಕೆ.ಶ್ವೇತಾ (4×100ಮೀ ರಿಲೆ), ಜಿ.ಸಂದೀಪ ಜಿ(ಹರ್ಡಲ್ಸ್). ಇವರು ಜಿಲ್ಕಾ ಮಟ್ಟದ ಕ್ರೀಡೆಗಳಲ್ಲಿ ಗಣನೀಯ ಸಾಧನೆ ಮಾಡಿ, ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಾಗಿದ್ದಾರೆ.
ಅಭಿನಂದನೆಗಳ ಮಹಾಪೂರ– ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾದ, ಕ್ರೀಡಾಪಟು ವಿದ್ಯಾರ್ಥಿನಿಯರಿಗೆ. ಕ್ಷೇತ್ರದ ಶಾಸಕರಾದ ಎನ್.ಟಿ.ಶ್ರೀನಿವಾಸ್, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯಕ ಸೇರಿದಂತೆ ಸರ್ವ ಸದಸ್ಯರು. ಪಟ್ಟಣ ಸೇರಿದಂತೆ ತಾಲೂಕಿನ ನಾಗರೀಕರು, ಶಿಕ್ಷಣ ಇಲಾಖೆ ಸೇರಿದಂತೆ ವಿವಿದ ಇಲಾಖೆಗಳ ಅಧಿಕಾರಿಗಳು, ಹಾಗೂ ಸಿಬ್ಬಂದಿಯವರು. ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, SDMC ಹಾಗೂ ಮೇಲುಸ್ತುವಾರಿ ಸಮಿತಿ ಪದಾಧಿಕಾರಿಗಳು.ವಿವಿದ ಸಮುದಾಯಗಳ ಮುಖಂಡರು, ವಿವಿದ ಪಕ್ಷಗಳ ಪ್ರಮುಖರು. ತಾಲೂಕಿನ ಶಿಕ್ಷಕರು, ಗಣ್ಯ ಮಾನ್ಯರು. ಮೇನ್ ಬಾಯ್ಸ್ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಸೇರಿದಂತೆ. ಭೋಧಕೇತರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮತ್ತು ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಇನ್ನೂ ಹೆಚ್ಚಿನ ಮಟ್ಟದ ಸಾಧನೆ ಮಾಡಿ, ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನದಲ್ಲಿ ವಿಚೇತರಾಗಲೆಂದು ಹಾರೈಸಿದ್ದಾರೆ. ✍️ ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ-9008937428

