ಶಿರಾಳಕೊಪ್ಪ:19/5/2026
ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ದೇಶದ ಶಿಕ್ಷಣ ವ್ಯವಸ್ಥೆಗೆ ದೊಡ್ಡ ಕಳಂಕವಾಗಿದೆ ಎಂದು ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಯುವ ಕಾಂಗ್ರೆಸ್ ಪಕ್ಷದ ವತಿಯಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಬೆಲೆ ಏರಿಕೆ ವಿಷಯದಲ್ಲೂ ಕೇಂದ್ರ ಸರ್ಕಾರವನ್ನು ಟೀಕಿಸಿದರು.

ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆಯನ್ನು ನಿಯಂತ್ರಿಸಿದ್ದ ಸರ್ಕಾರ, ಇದೀಗ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿ ಜನಸಾಮಾನ್ಯರ ಮೇಲೆ ಹೆಚ್ಚುವರಿ ಹೊರೆ ಹಾಕುತ್ತಿದೆ. ಆದರೆ, ನಮ್ಮ ಸಂಸದರು ಹಾಗೂ ಶಾಸಕರು ಮಾತ್ರ ಜನರ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು..
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಬಿಜೆಪಿ ಸರ್ಕಾರ ನೈತಿಕ ಹೊಣೆ ಹೊತ್ತು ದೇಶದ ವಿದ್ಯಾರ್ಥಿಗಳ ಮುಂದೆ ಕ್ಷಮೆ ಕೇಳಬೇಕು” ಎಂದು ಟೌನ್ ಕಾಂಗ್ರೆಸ್ ಅಧ್ಯಕ್ಷ ನಯಾಜ್ ಅಹ್ಮದ್ ಆಗ್ರಹಿಸಿದರು. ಇದೇ ವೇಳೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಪರವಾಗಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಸದ್ದು ಬಳ್ಳಿಗಾವಿ, ವಿದ್ಯಾರ್ಥಿಗಳು ವರ್ಷಪೂರ್ತಿ ಕಷ್ಟಪಟ್ಟು ಓದಿ ಪರೀಕ್ಷೆಗೆ ಸಿದ್ಧರಾಗುತ್ತಾರೆ. ಆದರೆ, ಅದನ್ನು ನಡೆಸುವ ಸರ್ಕಾರಗಳ ಈ ರೀತಿಯ ನಿರ್ಲಕ್ಷ್ಯ ಮತ್ತು ಅವ್ಯವಸ್ಥೆಯಿಂದಾಗಿ ಪರೀಕ್ಷಾ ವ್ಯವಸ್ಥೆಯ ಮೇಲೆ ವಿದ್ಯಾರ್ಥಿಗಳು ಹಾಗೂ ಪೋಷಕರು ಇಟ್ಟಿದ್ದ ವಿಶ್ವಾಸ ಕುಸಿಯುವ ಹಾಗೆ ಆಗಿದೆ . ಇದು ಸಾಮಾನ್ಯ ತಪ್ಪಲ್ಲ, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವ ಗಂಭೀರ ಘಟನೆಯಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಮುಖಂಡರು ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಬಳ್ಳಿಗಾವಿ ಕರಿಬಸಪ್ಪ ಸೇರಿದಂತೆ ಇತರೆ ಪಕ್ಷದ ಪ್ರಮುಖರು ಸಭೀಕರನ್ನುದ್ದೇಶಿಸಿ ಮಾತನಾಡಿದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮತ್ತೆ ಸಿಇಟಿ ಪರೀಕ್ಷೆಯನ್ನು ಮರು ಜಾರಿ ಮಾಡಬೇಕು ಎಂದು ಅಗ್ರಹಿಸಿ ಪಟ್ಟಣದ ನಾಡ ಕಚೇರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಆನವಟ್ಟಿ ಬಾಷ ಸಾಬ್ , ಸಾಲೂರು ಗ್ರಾಮ ಪಂಚಾಯತಿ ಅಧ್ಯಕ್ಷ ಹನುಮಂತ ನಾಯಕ , ಯುವ ಮುಖಂಡರಾದ ಮಂಜು ನಾಯಕ್, ಸಾಜೀದ್ ಅಲಿ , ಬಿಳಿಕಿ ಮಕ್ಬೂಲ್, ಸೂಫಿಯಾನ್, ಯುವರಾಜ ನಾಯಕ, ಸಮೀರ್. ಜಬಿ , ತಾಹ, ಸಫೀರ್ ಸೇರಿದಂತೆ ಬ್ರಹತ್ಭಾ ಸಂಖ್ಯೆ ಯಲ್ಲಿ ಕೈ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ನವೀದ್ ಶಿರಾಳಕೊಪ್ಪ

