ಶಿಕಾರಿಪುರ:18/01/2026
ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ಕೇಂದ್ರ ಸರ್ಕಾರದ ರೈತರ ಗುರುತಿನ ಐಡಿ ಕಡ್ಡಾಯ ಎಂದು ಸಹಾಯಕ ಕೃಷಿ ನಿರ್ದೇಶಕ ಕಿರಣ್ ಕುಮಾರ್ ಹರ್ತಿ ಹೇಳಿದರು.

ಶನಿವಾರ ಸುದ್ಧಿಗಾರ ರೊಂದಿಗೆ ಮಾತನಾಡಿದ ಅವರು ದಿನಾಂಕ: 01-02-2019ರ ಪೂರ್ವದಲ್ಲಿ ಜಮೀನು ಹೊಂದಿರುವ ರೈತರಿಗೆ ಕೇಂದ್ರ ಸರ್ಕಾರದ ಪಿಎಂ-ಕಿಸಾನ್ ಯೋಜನೆ ವಾರ್ಷಿಕ ರೂ.6000/- ಪ್ರೋತ್ಸಾಹಧನವನ್ನು ಇಲ್ಲಿಯವರೆಗೆ ಪಾವತಿಸಲಾಗುತ್ತಿದ್ದು.
ಈ ಪ್ರೋತ್ಸಾಹಧನವನ್ನು ಮುಂದುವರಿಸಲು ಪ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಕೇಂದ್ರ ಸರ್ಕಾರವು ಅಗ್ರಿಸ್ಟ್ಯಾಕ್ ಯೋಜನೆ ಅಡಿ ಗುರುತಿನ ಸಂಖ್ಯೆಯನ್ನು ಸೃಜಿಸುವುದು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ರಾಜ್ಯ ಸರ್ಕಾರದ ಪ್ರೂಟ್ಸ್ ತಂತ್ರಾಂಶದಿಂದ ದತ್ತಾಂಶವನ್ನು ಹಂಚಿಕೆ ಮಾಡಿ ಕೆಲವು ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ರೈತರ ಗುರುತಿನ ಸಂಖ್ಯೆಯನ್ನು ಸೃಜಿಸಲಾಗಿರುತ್ತದೆ. ಆದರೆ ಹೆಚ್ಚಿನ ಪಿಎಂ ಕಿಸಾನ್ ಫಲಾನುಭವಿಗಳಿಗೆ ಕೇಂದ್ರದ ರೈತರ ಗುರುತಿನ ಸಂಖ್ಯೆಯನ್ನು ಸೃಜಿನೆ ಮಾಡಬೇಕಾಗಿರುತ್ತದೆ. ಇದಕ್ಕಾಗಿ ರೈತರ ಇ-ಕೆವೈಸಿ, ಎಲೆಕ್ಟ್ರಾನಿಕ್ ಒಪ್ಪಿಗೆ ಹಾಗೂ ಒಟಿಪಿ ಆಧಾರಿತ ಮೊಬೈಲ್ ಸಂಖ್ಯೆ ಆಧಾರ್ ಇ-ಸೈನ್ ದೃಡೀಕರಣವು ಕಡ್ಡಾಯವಾಗಿರುತ್ತದೆ. ಈ ಸಂಬಂಧ ರೈತರು ತಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನಿನ ವಿವರಗಳನ್ನು ಪ್ರೋಟ್ಸ ತಂತ್ರಾಂಶದಲ್ಲಿ ಸೇರ್ಪಡೆ ಮಾಡುವುದು ಮತ್ತು ಎಲ್ಲಾ ಜಮೀನಿನ ವಿವರಗಳನ್ನು ದಾಖಲಿಸಿರುವುದಾಗಿ ಘೋಷಣೆಯನ್ನೂ ಸಹ ಒಟಿಪಿ ಆಧಾರದ ಮೇಲೆ ಮಾಡಬೇಕಾಗಿರುತ್ತದೆ. ಕೇಂದ್ರದ ಗುರುತಿನ ನೊಂದಣಿ ಆಗದೆ ಇರುವ ಪಟ್ಟಿಯು ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯ ಇರುತ್ತದೆ. ಆದ್ದರಿಂದ ಅಂತಹ ರೈತರು ತಮ್ಮ ಆಧಾರ್ ಕಾರ್ಡಗೆ ಜೋಡಣೆಯಾಗಿರುವ ಮೊಬೈಲ್ ನಂಬರಿನ ಮೊಬೈಲ್ ನ್ನು ಮತ್ತು ಪ್ರೋಟ್ಸ್ ತಂತ್ರಾಂಶದಲ್ಲಿ ಜೋಡಣೆಯಾಗಿರುವ ಮೊಬೈಲ್ ನಂಬರಿನ ಮೊಬೈಲ್ ನ್ನು ತೆಗೆದುಕೊಂಡು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಮೇಲಿನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿಕೊಂಡು ಕೇಂದ್ರದ ಗುರುತಿನ ಸಂಖ್ಯೆಯನ್ನು ಪಡೆದುಕೊಳ್ಳಬೇಕಾಗಿರುತ್ತದೆ.

ಕಿರಣ್ ಕುಮಾರ್ ಹರ್ತಿ ಸಹಾಯಕ ಕೃಷಿ ನಿರ್ದೇಶಕರು ಶಿಕಾರಿಪುರ
ಇದಾದ ನಂತರವೇ ಮುಂದಿನ ಕಂತಿನ ಪಿಎಂ-ಕಿಸಾನ್ ಯೋಜನೆಯ ಪ್ರೊತ್ಸಾಹಧನ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗುತ್ತದೆ. ಈ ಪ್ರಕ್ರಿಯೆ ದಿನಾಂಕ: 01-02-2019ರ ಪೂರ್ವದಲ್ಲಿ ಜಮೀನು ಹೊಂದಿರುವ ರೈತರಿಗೆ ಮಾತ್ರ ಅನ್ವಯವಾಗುತ್ತದೆ. ಈ ದಿನಾಂಕದ ನಂತರ ಪಿಎಂ-ಕಿಸಾನ್ ಪ್ರೊತ್ಸಾಹಧನ ಪಡೆಯುತ್ತಿರುವ ರೈತರು ತಮ್ಮ ಹೆಸರಿನಲ್ಲಿರುವ ಜಮೀನನ್ನು ಮಾರಾಟ ಮಾಡಿದ್ದಲ್ಲಿ, ಅವರ ಹೆಸರಿನಲ್ಲಿ ಹಾಲಿ ಯಾವುದೇ ಜಮೀನು ಇಲ್ಲದಂತಹ ರೈತರಿಗೆ ಪಿಎಂ-ಕಿಸಾನ್ ಪ್ರೊತ್ಸಾಹಧನ ಪಾವತಿಯನ್ನು ನಿಲ್ಲಿಸಲಾಗಿದೆ ಎಂದರು.
ವರದಿ: ನವೀದ್ ಶಿರಾಳಕೊಪ್ಪ 9538633929

