ಪತ್ರಿಕಾ ಪ್ರಕಟಣೆ
ದಿನಾಂಕಃ 24-10-2024 ರಂದು ಮಧ್ಯಾಹ್ನ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ *ಕುವೆಂಪು ನಗರದಲ್ಲಿ ಯಾರೋ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ* ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ *ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್,* ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, *ಶ್ರೀ ಅನಿಲ್ ಕುಮಾರ್ ಭೂಮರಡ್ಡಿ,* ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ ಮತ್ತು *ಶ್ರೀ ಎ ಜಿ ಕಾರ್ಯಪ್ಪ,* ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, *ಶ್ರೀ ಸುರೇಶ್ ಎಂ,* ಪೊಲೀಸ್ ಉಪಾಧಿಕ್ಷಕರು, ಶಿವಮೊಗ್ಗ-ಬಿ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ *ಶ್ರೀ ಸತ್ಯನಾರಾಯಣ. ವೈ* ಪೊಲೀಸ್ ನಿರೀಕ್ಷಕರು, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳಾದ
*1)ಭರತ್ ಟಿ @ ಜಾನ್ ಭರತ್,* 27 ವರ್ಷ, ಬಸವನಗುಡಿ ಶಿವಮೊಗ್ಗ ಮತ್ತು
*2) ನರಸಿಂಹ ಎಸ್ @ ದಾಸ,* 39 ವರ್ಷ, ರಾಗಿಗುಡ್ಡ ಶಿವಮೊಗ್ಗ ರವರುಗಳನ್ನು ದಸ್ತಗಿರಿ ಮಾಡಿ, ಸದರಿ ಆರೋಪಿತರಿಂದ *ಅಂದಾಜು ಮೌಲ್ಯ 28,000/- ರೂಗಳ 668 ಗ್ರಾಂ ತೂಕದ ಒಣ ಗಾಂಜಾ ಮತ್ತು ರೂ 400/- ನಗದು ಹಣವನ್ನು ಅಮಾನತ್ತು ಪಡಿಸಿಕೊಂಡು ಠಾಣಾ ಗುನ್ನೆ ಸಂಖ್ಯೆ 0300/2024 ಕಲಂ 20(b) (ii) A, 8(c) NDPS ಕಾಯ್ದೆ* ರೀತ್ಯಾ ಪ್ರಕಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.

